1 ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ. 2 ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. 3 ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. 4 ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ. 5 ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು. 6 ಈ ಕಾರಣದಿಂದ ಸತ್ತಿರುವವರು ಶರೀರದಲ್ಲಿ ಮನುಷ್ಯರಿಗೆ ತಕ್ಕಂತೆ ನ್ಯಾಯತೀರ್ಪನ್ನು ಹೊಂದಿ ಆತ್ಮದಲ್ಲಿ ದೇವರಿಗಾಗಿ ಜೀವಿಸುವಂತೆ ಅವರಿಗೂ ಸುವಾರ್ತೆ ಸಾರಲ್ಪಟ್ಟಿತು. 7 ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ. 8 ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ. 9 ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. 10 ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. ಒಬ್ಬನು ಬೋಧಿಸುವವನಾದರೆ 11 ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. 12 ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. 13 1ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. 14 ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ 15 ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು. 16 ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. 17 ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು? 18 ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ? ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು 19 ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.