ಅದ್ಯಾಯ 1

ಪೀಠಿಕೆ 1 ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ - 2 ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ. ಪೌಲನು ಫಿಲಿಪ್ಪಿಯ ಸಭೆಯವರಿಗೋಸ್ಕರ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ ಪ್ರಾರ್ಥನೆಗಳು 3 4 ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ. 5 ಮೊದಲಿನಿಂದ ಇಂದಿನ ವರೆಗೂ ಸುವಾರ್ತಾಪ್ರಚಾರದಲ್ಲಿ ನನಗೆ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ. 6 ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು. 7 ವಿಷಯದಲ್ಲಿ ನನಗಿರುವ ಈ ಅಭಿಪ್ರಾಯವು ನ್ಯಾಯವಾಗಿದೆ; ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ. 8 ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವುಸ್ ಸಾಕ್ಷಿ. 9 ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. 10 ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ 11 ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು; ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. ಪೌಲನು ರೋಮಾಪುರದಲ್ಲಿ ಸೆರೆಯವನಾಗಿದ್ದು ತನ್ನ ಸ್ಥಿತಿಯನ್ನೂ, ಕೋರಿಕೆಯನ್ನೂ ಕುರಿತು ಬೋಲಿಕಯೇನ 12 ನನಗೆ ಸಂಭವಿಸಿರುವ ಬಾಧೆಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. 13 ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು. 14 ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ. 15 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. 16 ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ. 17 ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಯಥಾರ್ಥವಾಗಿ ಬರೋಬರ್ ಹುಯು 18 ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. 19 ನನಗೆ ಸಂಭವಿಸಿರುವುದು, ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಮತ್ತು ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು. 20 ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಿದೆ; ಹಾಗೆಯೇ ಆಗುವುದೆಂಬ ಭರವಸೆವುಂಟು. 21 ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ. 22 ಬದುಕಬೇಕಾದ್ದಲ್ಲಿ ನನ್ನ ದುಡಿಮೆಯ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು. 23 ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ; 24 ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ. 25 ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ, ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ. 26 ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು. ಕ್ರೈಸ್ತರು ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಬೇಕೆಂಬ ಬೋಧನೆ 27 ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ಮಲಂ ಕರಿಲಿಶ್ 28 ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಪ್ರಮಾಣವಾಗಿದೆ. 29 ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವುದೂ ಮತ್ತು ಆತನಿಗೋಸ್ಕರ ಬಾಧೆಯನ್ನನುಭವಿಸುವುದೂ ನಿಮಗೆ ವರವಾಗಿ ದೊರಕಿದೆ. 30 ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.ತುನಬಿ ಚಹ