1 ಪ್ರೋತ್ಸಾಹ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ 2 ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋನ್ಯಭಾವವುಳ್ಳವರೂ ಹಾಗೂ ಒಂದೇ ಗುರಿಯಿಟ್ಟುಕೊಂಡವರೂ ಹುಇರಹೋ 3 ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. 4 ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. 5 ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6 ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ 7 ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. 8 ಕಾಣಿಸಿಕೊಂಡಾಗ, ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9 ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10 ಸ್ವರ್ಗ ಮತ್ತು ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು 11 ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ಹೇಳಿ, ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು. 12 ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಕೇಳಿದಂತೆ ಈಗಲೂ ಕೇಳಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. 13 ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಹುಇಗಯು 14 ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. 15 ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. 16 ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜ್ಯೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಪೈದಹುಯು 17 ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ. 18 ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಪಡಿರಿ. ಪೌಲನು ಎಪಫ್ರೊದೀತನನ್ನು ಫಿಲಿಪ್ಪಿಯವರಿಗೆ ಕಳುಹಿಸಿ ತಿಮೊಥೆಯನನ್ನು ಮುಂದೆ ಕಳುಹಿಸುತ್ತೇನೆಂದು ಹೇಳಿದ್ದು 19 ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯ ತಂದುಕೊಂಡೇನು. 20 ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. 21 ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವುದಿಲ್ಲ. 22 ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು. 23 ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ. 24 ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. 25 ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ. 26 ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ಸುದ್ದಿಯನ್ನು ನೀವು ಕೇಳಿದ್ದರಿಂದ ಅವನು ನೊಂದುಕೊಂಡನು. 27 ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು. 28 ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ಅವಸರದಿಂದ ಕಳುಹಿಸಿದ್ದೇನೆ. 29 30 ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕೊರತೆಯಾದದ್ದನ್ನು ತುಂಬುವುದಕ್ಕಾಗಿ ಅವನು ಜೀವದ ಆಸೆಯನ್ನು ತೊರೆದು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಸ್ಥಿತಿಯಲ್ಲಿದ್ದನೆಂದು ನೀವು ತಿಳಿದು ಅವನನ್ನು ಪೂರ್ಣ ಸಂತೋಷದಿಂದ ಕರ್ತನ ಹೆಸರಿನಲ್ಲಿ ಸೇರಿಸಿಕೊಳ್ಳಿರಿ. ಅಂಥವರನ್ನು ಮಾನ್ಯರೆಂದೆಣಿಸಿರಿ.