ಅಧ್ಯಾಯ 5

1 ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ, 2 ವೃದ್ಧಸ್ತ್ರೀಯರನ್ನು ತಾಯಿಯಂತೆಯೂ ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. 3 ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರನ್ನು 4 ಗೌರವಿಸುವುದಕ್ಕೂ, ತಂದೆತಾಯಿಗಳಿಗೆ ಪುರಸ್ಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ 5 ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. 6 ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ. 7 ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು. 8 ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ 9 ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿಲ್ಲದ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು; ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿದರಬೇಕು. 10 ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ; ಅವರು ಮಕ್ಕಳನ್ನು ಸಾಕಿಕೊಂಡು ಅತಿಥಿಸತ್ಕಾರವನ್ನು ಮಾಡುತ್ತಾ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ 11 ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ; ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು 12 ಇಚ್ಛಿಸಿಯಾರು. ಅಂಥವರು ತಾವು ಮೊದಲು ಕೊಟ್ಟ ಭರವಸೆಗೆ ತಪ್ಪಿದರೆಂಬ ಅವಮಾನಕ್ಕೊಳಗಾಗುವರು. 13 ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ; ಮೈಗಳ್ಳರಾಗುವುದಲ್ಲದೆ ಹರಟೆಮಾತನಾಡುವವರೂ ಇತರರ ವಿಷಯಗಳಲ್ಲಿ 14 ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರಲಿ; ಇದು ನನಗೆ ಒಳ್ಳೆಯದಾಗಿ ತೋಚುತ್ತದೆ; ಹಾಗೆ 15 ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು. ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. 16 ನಂಬುವವಳಾದ ಸ್ತ್ರೀಯ ಅಧೀನದಲ್ಲಿ ವಿಧವೆಯರಿದ್ದರೆ ಆಕೆಯೇ ಅವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರಿಗೆ ಸಹಾಯ ಮಾಡಬೇಕಾಗಿರುವುದರಿಂದ ಆಕೆಯು ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. 17 ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ 18 ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ, ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ>> ಶಾಸ್ತ್ರದಲ್ಲಿ ಹೇಳಿದೆಯಲ್ಲಾ. 19 ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ 20 ಅದನ್ನು ಒಪ್ಪಿಕೊಳ್ಳಬೇಡ. ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ಉಳಿದವರಿಗೂ 21 ಮೊದಲೇ ತಪ್ಪುಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ 22 ಖಂಡಿತವಾಗಿ ಹೇಳುತ್ತೇನೆ. ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ನಾಯಕತ್ವಕ್ಕೆ ನೇಮಿಸಬೇಡ. ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನಾಗದೆ 23 ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು 24 ಸ್ವಲ್ಪವಾಗಿ ತೆಗೆದುಕೊ. ಕೆಲವರ ಪಾಪಕೃತ್ಯಗಳು ಪ್ರಸಿದ್ಧವಾಗಿದ್ದು ಅವರು ಇಂಥವರೆಂದು ಮೊದಲೇ ತಿಳಿಯಪಡಿಸುತ್ತವೆ; ಬೇರೆ ಕೆಲವರ ಪಾಪಕೃತ್ಯಗಳು 25 ಮರೆಯಾಗಿದ್ದು ತರುವಾಯ ತಿಳಿದುಬರುತ್ತವೆ. ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಬೆಳಕಿಗೆ