ಅಧ್ಯಾಯ 1

1 ಕ್ರಿಸ್ತನ ಪೌಲನು ದೇವರು ಆರಿಸಿಕೊಂಡವರ ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. 2 ದೇವರು ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ಕಾಲದಲ್ಲಿ ಸಂದೇಶವನ್ನು 3 ಸಾರುವುದರ ಮೂಲಕ ತನ್ನ ವಾಕ್ಯವನ್ನು ಪ್ರಕಟಪಡಿಸಿದನು. ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾ 4 ನಮ್ಮ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ. ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯು, ಕರುಣೆಯು ಮತ್ತು ಶಾಂತಿಯು ಆಗಲಿ. ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು ನೀನು ಕ್ರೇತ ದ್ವೀಪದಲ್ಲಿ 5 ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ 6 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ಹೃದಯಪೂರ್ವಕವಾಗಿ ನಂಬಿದವರಾಗಿರಬೇಕು; ಅವರು ದುರ್ಮಾರ್ಗಿಗಳೂ, ವ್ಯಭಿಚಾರ ಮತ್ತು ಅವಿಧೇಯತೆಗೆ ಆರೋಪಿಗಳಾಗಿರಬಾರದು ಯಾಕೆಂದರೆ ಸಭಾಧ್ಯಕ್ಷನು . 7 ದೇವರ ಮನೆವಾರ್ತೆಯವನಾಗಿರುವದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ ಕುಡಿದು ಜಗಳಮಾಡುವವನೂ, ಹೊಡೆದಾಡುವವನೂ ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು ತಾನು ಸುಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ ಕ್ರಿಸ್ತನ ಉಪದೇಶಕ್ಕನುಸಾರವಾಗಿ 9 ನಂಬತಕ್ಕ ವಚನಗಳನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು. ಅಧಿಕಾರಕ್ಕೆ ಒಳಗಾಗದವರ ವಿಷಯದಲ್ಲಿ ತೀತನು ಮಾಡಬೇಕಾದದ್ದು 10 ಅನೇಕರು ಬರೀ ಮಾತುಗಾರರೂ, ಮೋಸಗಾರರೂ ಆಗಿದ್ದು ಕ್ರಿಸ್ತನ ಅಧಿಕಾರಕ್ಕೆ ಒಳಪಡದವರಾಗಿದ್ದಾರೆ; ಅವರೊಳಗೆ ಹೆಚ್ಚು ಜನರು ಸುನ್ನತಿಯವರು. ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ 11 ಉಪದೇಶವನ್ನು ಮಾಡಿ ಮನೆ ಮನೆಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರನ್ನು ಅಡ್ಡಿಪಡಿಸುವುದು ಅಗತ್ಯವಾಗಿದೆ. 12 ಕ್ರೇತದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ 13 ಪ್ರವಾದಿಯು ಹೇಳಿದ್ದಾನೆ. ಈ ಸಾಕ್ಷಿಯು ನಿಜವೇ ಆಗಿದೆ. 14 ಆದಕಾರಣ ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಅಸತ್ಯವಾದಿಗಳಾದ ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ ಕ್ರಿಸ್ತ ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು. 15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸಾಕ್ಷಿಯೂ ಎರಡೂ ಮಲಿನವಾಗಿವೆ. 16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯ ಕೃತ್ಯಗಳನ್ನೆಸಗುವವರೂ, 16 ಅವಿಧೇಯರೂ, ಸತ್ಕಾರ್ಯಗಳಿಗೆ ಅಪ್ರಯೋಜಕರೂ ಆಗಿರುವುದರಿಂದ ದೇವರನ್ನು ಅರಿಯದವರೆಂದು ತಮ್ಮ ಕೃತ್ಯಗಳಿಂದಲೇ ಹೇಳಿದಂತಾಯಿತು.