ನೇಮನಿಷ್ಠೆಗಳಿಂದಲ್ಲ ನಂಬಿಕೆಯಿಂದಲೇ ನೀತಿವಂತರಾಗುತ್ತೇವೆಂಬುದಕ್ಕೆ ಪ್ರಮಾಣ 1 ಎಲೈ ಬುದ್ಧಿಹೀನರಾದ ಗಲಾತ್ಯದವರೇ, ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ? 2 ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ? ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ? 3 ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಕೊನೆಗೊಳಿಸುವಿರೋ? 4 ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? 5 ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ? ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ? 6 <<ದೇವರನ್ನು ನಂಬಿದನು, ಆ ನಂಬಿಕೆ ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು>> ಎಂಬುದಾಗಿ ಬರೆದಿದೆಯಲ್ಲಾ. 7 ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ. 8 ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ - <<ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ>> ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು. 9 ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು. 10 ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗೆಂದರೆ, <<ಧರ್ಮಗ್ರಂಥದಲ್ಲಿ ಬರೆದಿರುವವುಗಳೆಲ್ಲವನ್ನೂ ನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು>> ಧರ್ಮಶಾಸ್ತ್ರದಲ್ಲಿ ಬರೆದಿದೆ. 11 ಧರ್ಮಶಾಸ್ತ್ರದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಯಾಕೆಂದರೆ <<ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು>> ಬರೆದಿದೆ. 12 ಆದರೆ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, <<ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು>> ಎಂದು ಬರೆದಿದೆ. 13 ಉಂಟಾದ ಆಶೀರ್ವಾದವು 14 ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ, ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ ಕ್ರಿಸ್ತನು ತಾನೇ ನಮ್ಮ ನಿಮಿತ್ತ ಶಾಪಗ್ರಸ್ತನಾಗಿ, ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು; ಯಾಕೆಂದರೆ <<ಮರಕ್ಕೆ ತೂಗುಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು>> ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ. ತನ್ನ ಮರಣದ ಮೂಲಕ ಆತನು ನಮ್ಮನ್ನು ಕೊಂಡುಕೊಂಡನು. 15 ನಾನು ಮನುಷ್ಯರ ನಡುವೆ ಆಚರಣೆಯಲ್ಲಿರುವ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವುದಿಲ್ಲ. ಅದಕ್ಕೆ ಹೆಚ್ಚಿನದಾಗಿ ಏನನ್ನೂ ಸೇರಿಸುವುದಿಲ್ಲ. 16 ಅಬ್ರಹಾಮನಿಗೆ ಮತ್ತು ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು <<ನಿನ್ನ ಸಂತತಿಗಳಿಗೆ>> ಎಂದು ಹೇಳಿ ಅನೇಕರನ್ನು ಸೂಚಿಸದೆ <<ನಿನ್ನ ಸಂತತಿಗೆ>> ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ; ಆ ಒಬ್ಬನು ಕ್ರಿಸ್ತನೇ. 17 ಹೇಳಬಯಸುವುದೇನೆಂದರೆ, ದೇವರು ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ನಂತರ ಬಂದ ಧರ್ಮಶಾಸ್ತ್ರವು ಅದನ್ನು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವುದಿಲ್ಲ. 18 ಬಾಧ್ಯತೆಯು ಧರ್ಮಶಾಸ್ತ್ರದಿಂದ ದೊರೆಯುವುದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವುದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. ನಂಬಿಕೆಯು ಸಾಕಾಗಿದ್ದರೆ ಮೋಶೆಯ ಧರ್ಮಶಾಸ್ತ್ರವು ಯಾಕೆ? 19 ಧರ್ಮಶಾಸ್ತ್ರವು ಯಾತಕ್ಕಾಗಿದೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. 20 ಇದ್ದ ಪಕ್ಷದಲ್ಲಿ ಮಧ್ಯಸ್ಥನು ಬೇಕಾಗಿಲ್ಲ. ದೇವರು ಒಬ್ಬನೇ. 21 ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಸಂದೇಹವಿಲ್ಲದೆ ಧರ್ಮಶಾಸ್ತ್ರವು ನೀತಿಗೆ ಆಧಾರವಾಗಿರುತ್ತಿತ್ತು. 22 ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು, ಧರ್ಮಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು. 23 ನಂಬಿಕೆಯ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಧರ್ಮಶಾಸ್ತ್ರದ ಒಳಗೆ ಅದನ್ನು ಮುಚ್ಚಿಡಲಾಗಿತ್ತು. 24 ನಂಬಿಕೆಯಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಕ್ಕಾಗಿ ಕ್ರಿಸ್ತನಲ್ಲಿಗೆ ಸೇರುವತನಕ ಅದು ನಮ್ಮನ್ನು ಕಾಯುತ್ತಾ ಮುನ್ನಡೆಸುವ ಪಾಲಕನಂತಾಯಿತು. 25 ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವಿನ್ನು ಕಾಯುವವನ ಕೈಕೆಳಗಿರುವವರಲ್ಲ. 26 ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. 27 ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಮತ್ತು ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29 ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರೂ ವಾಗ್ದಾನಕ್ಕನುಸಾರವಾಗಿ ಹಕ್ಕುದಾರರೂ ಆಗಿದ್ದೀರಿ.