1 ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. 2 ಪೌಲನೆಂಬ ನಾನು ನಿಮಗೆ ಹೇಳುತ್ತೇನೆ - ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ. 3 ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ – ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ. 4 ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿ ಹೋದವರಾಗಿದ್ದಾರೆ. 5 ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. 6 ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಸರಿಯೇ. ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯಿಂದೇ ಪ್ರಮುಖವಾಗಿರುವುದು. ಚೆನ್ನಾಗಿ ಓಡಿದ್ದೀರಿ; ಆದರೆ 7 ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು? 8 ಬೋಧನೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ. 9 ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು. 10 ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು. 11 ಸಹೋದರರೇ, ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ? 12 ಜಗಳಗಳನ್ನುಂಟುಮಾಡುವವನು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು. ನೇಮನಿಷ್ಠೆಗಳ ಅಧಿಕಾರವನ್ನು ತಪ್ಪಿಸಿ ಬಿಡುಗಡೆಯನ್ನು ಹೊಂದಿದವರು ಮನಸ್ಸುಬಂದಂತೆ ನಡೆಯದೆ ಪವಿತ್ರಾತ್ಮನಿಗೆ ಅನುಗುಣವಾಗಿ ಯೋಗ್ಯರಾಗಿ ನಡೆಯುವರು 13 ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. 14 ನೆರೆಯವನನ್ನು ನಿನ್ನಂತೆಯೇ ಪ್ರೀತಿಸು>> ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ. 15 ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ. 16 ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರ ಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. 17 ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮಾಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರುದ್ಧವಾಗಿವೆ. 18 ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಗಳಿಗೆ ಅಧೀನರಲ್ಲ. 19 ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ; ಅದು ಯಾವುವೆಂದರೆ - ಜಾರತ್ವ, ಬಂಡುತನ, ನಾಚಿಕೆಗೇಡಿತನ, 20 ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. 21 ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. 22 ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ – ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. 23 ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24 ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. ಕ್ರೈಸ್ತರು ಪವಿತ್ರಾತ್ಮಪ್ರೇರಿತರಾಗಿ ನಡೆಯಬೇಕಾದ ರೀತಿಯ ವಿಷಯದಲ್ಲಿ ಕೆಲವು ಬುದ್ಧಿಮಾತುಗಳು 25 ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26 ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.