ಲೇವಿಯರ ಕೊನೆಯಿಲ್ಲದ ಯಜ್ಞಗಳು ಸಾರ್ಥಕವಾಗುವುದಿಲ್ಲ; ಯೇಸುವಿನ ಒಂದೇ ಯಜ್ಞವು ಸದಾಕಾಲವೂ ಸಾರ್ಥಕವಾದದ್ದು 1 ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ನೆರಳಾಗಿವೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲವಾದದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು. 2 ಆರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪದ ಪ್ರಜ್ಞೆ ಕಾಡದೆ ಇರುವುದ್ದರಿಂದ ಮತ್ತೆ ಯಜ್ಞಗಳ ಅಗತ್ಯವಿರುತ್ತಿರಲಿಲ್ಲ ಹೀಗೆ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲವೋ? 3 ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು; 4 ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5 ಕ್ರಿಸ್ತನು ಭೂಲೋಕದೊಳಗೆ ಬರುವಾಗ - <<[ದೇವರೇ,] ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ; 6 ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ;>> 7 ನಾನು - <<ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ>> ಎಂದು ಹೇಳಿದೆನು. 8 ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, <<ಸರ್ವಾಂಗಹೋಮಗಳೂ, ಪಾಪಪರಿಹಾರಕ ಯಜ್ಞಗಳೂ, ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ>> ಎಂದು ಹೇಳಿದ್ದಾನೆ. 9 ಆತನು <<ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ>> ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10 ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. 11 ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. 12 ಕ್ರಿಸ್ತನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13 ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. 14 ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. 15 ಸಹ ನಮಗೆ ಸಾಕ್ಷಿಕೊಡುವಾತನಾಗಿ, - 16 <ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು> ಹೀಗಿರುವುದು - <ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು, ಎಂದು ಕರ್ತನು ನುಡಿಯುತ್ತಾನೆ.> >> ಎಂಬುದಾಗಿ ಹೇಳಿದ ತರುವಾಯ ಇನ್ನು - 17 ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.>> ಎಂದು ಹೇಳುತ್ತಾನೆ. 18 ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವುದು ಅವಶ್ಯಕತೆ ಇಲ್ಲ. ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ; ಆತನ ಯಜ್ಞವನ್ನು ಬೇಡವೆಂದರೆ ಬೇರೊಂದಿಲ್ಲ; ನಾವು ಹಿಂಸೆ ತಾಳಬೇಕಾದರೂ ಹಿಂಜರಿಯಬಾರದು ಎಂದು ಬೋಧೆ 19 ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. 20 ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. 21 22 ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಮಹಾಯಾಜಕನು ನಮಗಿರುವುದರಿಂದ, ನಾವು ಯಥಾರ್ಥಹೃದಯದಿಂದಲೂ ನಂಬಿಕೆಯ ಪೂರ್ಣನಿಶ್ಚಯದಿಂದಲೂ ತೊಳೆದ ದೇಹದಿಂದಲೂ ದೇವರ ಸಮೀಪಕ್ಕೆ ಬರೋಣ. 23 ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ; ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು. 24 ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಪ್ರೆರೇಪಿಸಬೇಕೆಂದು ಹುರಿದುಂಬಿಸೋಣ. 25 ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ. ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ. 26 ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ; 27 ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು. 28 ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ. 29 ದೇವಕುಮಾರನನ್ನು ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ ಇನೆಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ? 30 ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು>> ಹೇಳಿದಾತನನ್ನು ಬಲ್ಲೆವು; ಇದಲ್ಲದೆ <<ಕರ್ತನು ತನ್ನ ಜನರಿಗೆ ನ್ಯಾಯ ತೀರಿಸುವನು>> ಎಂದು ಹೇಳಿಯದೆ. 31 ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು. 32 ನೀವು ಜ್ಞಾನಪ್ರಕಾಶವನ್ನು ಹೊಂದಿದ ಮೇಲೆ ಕಷ್ಟಾನುಭವವೆಂಬ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ; 33 ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ. 34 ಸೆರೆಯವರಿಗೆ ಅನುತಾಪ ತೋರಿಸಿ ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ, ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ. 35 ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. 36 ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37 ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. 38 ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.>> 39 ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.