ಅದ್ಯಾಯ 4

1 2 1ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಎಚ್ಚರವಾಗಿರೋಣ. 2ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆ ಹೋದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. 3 ಕ್ರಿಸ್ತ ನಂಬಿಕೆಯಲ್ಲಿರುವ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಯಾಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ <<ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು>> ಎಂದು ಹೇಳಿದೆಯಲ್ಲಾ. 4 ಒಂದು ಕಡೆ ಏಳನೆಯ ದಿವಸವನ್ನು ಕುರಿತಾಗಿ, - <<ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು>> ಬರೆದದೆ. 5 ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು>> ಆತನು ಪುನಃ ಹೇಳಿದ್ದಾನೆ. 6 ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುವುದಕ್ಕೆ ದೇವರು ಇನ್ನೂ ಅನುಮತಿಸುವವನಾಗಿದ್ದಾನೆ. ಇಸ್ರಾಯೇಲ್ಯರು ಮೊದಲು ಶುಭವರ್ತಮಾನವನ್ನು ಕೇಳಿ ಅವಿಧೇಯರಾದ ಕಾರಣ ಅದರಲ್ಲಿ ಸೇರದೆಹೋದದ್ದರಿಂದಲೂ 7 ಬಹುಕಾಲದ ನಂತರ ಆತನು ದಾವೀದನ ಮೂಲಕ ‘ಈ ಹೊತ್ತೇ’ ಎಂದು ಬೇರೊಂದು ದಿವಸವನ್ನು ಗೊತ್ತುಮಾಡಿದ್ದಾನೆ; ಹೇಗೆಂದರೆ - <<ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಡುವುದಾದರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ!>> ಎಂದು ಹೇಳುತ್ತಾನಷ್ಟೆ. 8 ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲಾ. 9 ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು. 10 ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ತಾನೂ ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. 11 ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ; ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ. 12 ದೇವರ ವಾಕ್ಯವು ಜೀವವುಳ್ಳದ್ದು, ಶಕ್ತಿಯುಳ್ಳದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. 13 ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ. ಶ್ರೇಷ್ಠ ಮಹಾಯಾಜಕನ ಸುಲಕ್ಷಣಗಳು ಯೇಸುವಿನಲ್ಲಿ ಉಂಟೆಂಬುದು. 14 ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. 15 ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳನ್ನು ಅರ್ಥಮಾಡಿಕೊಳ್ಳಲು ಶಕ್ತನಾಗಿದ್ದಾನೆ; ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. 16 ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.