ಅದ್ಯಾಯ 5

1 ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು. 2 ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು. 3 ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು. 4 ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. 5 ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ <<ನೀನು ನನ್ನ ಮಗನು; ಈ ಹೊತ್ತು ನಾನು ನಿನಗೆ ತಂದೆಯಾದೆನು>> ಎಂದು ದೇವರೇ ಹೇಳಿದನು. 6 ಇನ್ನೊಂದು ಕಡೆಯಲ್ಲಿ, <<ನೀನು ಮೆಲ್ಕಿಜೆದೇಕನ ಕ್ರಮದ ಪ್ರಕಾರ ಸದಾಕಾಲವೂ ಇರುವ ಮಹಾಯಾಜಕನು>> ಎಂದು ಹೇಳುತ್ತಾನೆ. 7 ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. 8 ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. 9 ಆತನು ಪರಿಪೂರ್ಣಗೊಳಿಸಿ ತನಗೆ ವಿಧೇಯರಾಗಿರುವ ಎಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು. 10 ಆತನು ಮೆಲ್ಕಿಜೆದೇಕನ ಕ್ರಮದ ಪ್ರಕಾರವಾದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು. ವೃದ್ಧಿಯಾಗದಿರುವ ಕ್ರೈಸ್ತರಿಗೆ ಎಚ್ಚರಿಕೆ 11 ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ. 12 ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ತಿರುಗಿ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. 13 ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ. 14 ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ಸ್ವಂತ ಅನುಭವದಿಂದ ಒಳ್ಳೆಯದಾವುದು ಮತ್ತು ಕೆಟ್ಟದಾವುದು ಎಂದು ವಿವೇಚಿಸಲು, ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು ಕಲಿತವರಿಗೋಸ್ಕರವಾಗಿದೆ.