ಅದ್ಯಾಯ 6

1 ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, 2 ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ, ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. 3 ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು. 4 ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು 5 ಒಳ್ಳೆಯ ವಾಕ್ಯವನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, 6 ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ; ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ. 7 ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ; 8 ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ. 9 ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮವಾಗಿದ್ದೀರೆಂದು ನಂಬಿದ್ದೇವೆ. 10 ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವುದಿಲ್ಲ ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ. ದೇವರ ವಾಗ್ದಾನಗಳು ಎಷ್ಟು ಮಾತ್ರಕ್ಕೂ ತಪ್ಪುವುದಿಲ್ಲವೆಂಬುದು. 11 ಸಂಪೂರ್ಣ ನಿಶ್ಚಯತ್ವವನ್ನು ಹೊಂದುವುದಕ್ಕಾಗಿ ಅಂತ್ಯದವರೆಗೂ ನೀವು ಅದೇ ಶ್ರದ್ಧೆಯನ್ನು ತೋರಿಸಬೇಕೆಂದು ನಾನು ಬಹಳವಾಗಿ ಅಪೇಕ್ಷಿಸುತ್ತೇವೆ. 12 ಸೋಮಾರಿಗಳಾಗಿರಬೇಕೆಂದು ಅಪೇಕ್ಷಿಸುವುದಿಲ್ಲ ಬದಲಿಗೆ ನಂಬಿಕೆಯಿಂದಲೂ, ತಾಳ್ಮೆಯಿಂದಲೂ, ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ. 13 ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು - 14 ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು>> ಎಂದು ಹೇಳಿದನಷ್ಟೆ. 15 ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು. 16 ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ; ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು. 17 ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು. 18 ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ಬದಲಾಗದ ಆಧಾರಗಳ ಮೂಲಕ ಬಲವಾದ ಆದರಣೆ ಧೈರ್ಯವುಂಟಾಯಿತು. 19 ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗುರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ. 20 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನಿಧ್ಯವನ್ನು ಪ್ರವೇಶಿಸಿದ್ದಾನೆ.