1 ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ನಿಯಮಗಳೂ ವಿಧಿ-ವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು. 2 ದೇವದರ್ಶನ ಗುಡಾರವು ಕಟ್ಟಲ್ಪಟ್ಟು ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಳ ಎಂದು ಕರೆಯಲ್ಪಟ್ಟಿತು. 3 ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲ್ಪಟ್ಟಿತು. 4 ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು. 5 ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ. 6 ಇವುಗಳನ್ನು ಸಿದ್ಧಮಾಡಲ್ಪಟ್ಟ ಮೇಲೆ ಯಾಜಕರು ನಿತ್ಯವೂ ದೇವದರ್ಶನ ಗುಡಾರದ ಮೊದಲನೆಯ ಭಾಗವಾದ ಪವಿತ್ರ ಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವರ ಸೇವೆಯ ವಿಧಿಗಳನ್ನು ನಿರಂತರವಾಗಿ ಮಾಡುತ್ತಿದ್ದರು. 7 ಎರಡನೆಯ ಕೋಣೆಯೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೊಮ್ಮೆ ಪ್ರವೇಶಿಸುತ್ತಿದ್ದನು. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಹೋಗುತ್ತಿರಲಿಲ್ಲ. ಆ ರಕ್ತವನ್ನು ತನ್ನಗಾಗಿಯೂ ಮತ್ತು ಜನರ ಉದ್ದೇಶಪೂರ್ವಕವಲ್ಲದ ಅಪರಾಧಗಳಿಗೋಸ್ಕರವೂ ಸಮರ್ಪಿಸಬೇಕಾಗಿತ್ತು. 8 ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. 9 ಈಗಿನ ಕಾಲಕ್ಕೆ ಒಂದು ಹೋಲಿಕೆಯಾಗಿದೆಯಷ್ಟೇ. ಅದೇನಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ. 10 ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. 11 ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದ ಮೂಲಕ 12 ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯವಿಮೋಚನೆಯನ್ನು ಸಾಧಿಸಿದನು. 13 ಹೋರಿಗಳ ರಕ್ತವು ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ 14 ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ? 15 ಕರೆಯಲ್ಪಟ್ಟ ಜನರು, ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಆದ್ದರಿಂದ ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯವಾಯಿತು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. 16 ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ. 17 ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ. 18 ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ. 19 ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು. 20 ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ>> ಎಂದು ಹೇಳಿದನು. 21 ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು. 22 ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ. 23 ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ. 24 ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು. 25 ಇದಲ್ಲದೆ ಮಹಾಯಾಜಕನು ವರ್ಷ ವರ್ಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ. 26 ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು. 27 ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ 28 ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.