Chapter 9

1 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. 2 ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ 3 ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು. ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ 4 ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ 5 ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ. ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ 6 ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ. ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ 7 ಪ್ರೇರೇಪಿಸಿದ್ದು ಆದರೆ ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ ಪ್ರತಿಯೊಬ್ಬನೂ ತನ್ನ 8 ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. 9 ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ 10 ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು. ಅವನು ಬಡವರಿಗೆ ಧಾರಾಳವಾಗಿ ನೀಡುವನು; 11 ಅವನ ನೀತಿಯು ಸದಾಕಾಲವೂ ಇರುವುದು. ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ 12 ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; 13 ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ. ಹೇಗೆಂದರೆ ನೀವು ಮಾಡುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು 14 ನೀಗಿಸುವುದು ಮಾತ್ರವಲ್ಲದೆ ಅನೇಕ ರೀತಿಯಲ್ಲಿ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡಲು ಇದು ಕಾರಣವಾಗುತ್ತದೆ. ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, 15 ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ