Chapter 8

1 ಲೇವಿಯರ ಯಾಜಕತ್ವವು ಮುಂದೆ ಬರಬೇಕಾದದ್ದನ್ನು ಸೂಚಿಸುವುದರ ನೆರಳಾಗಿರುವುದರಿಂದ ತಾತ್ಕಾಲಿಕವಾದದ್ದು; ಯೇಸುವಿನ ಯಾಜಕತ್ವವು ಶಾಶ್ವತವಾದದ್ದು ಈಗ ಹೇಳುವ ಸಂಗತಿಗಳಲ್ಲಿ ಸಾರವೇನಂದರೆ – 2 ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ. ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ಕರ್ತನೇ ಹಾಕಿದ ನಿಜವಾದ ದೇವದರ್ಶನ ಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ. 3 ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ. 4 ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ. ಗುಡಾರವನ್ನು ಕಟ್ಟುವುದಕ್ಕಿದ್ದಾಗ, 5 ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ, ಆಗಿರುವಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. 6 ಯೇಸು ಕ್ರಿಸ್ತನು ಅದಕ್ಕಿಂತ ಈಗ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ ಯಾಕೆಂದರೆ ಈತನು ಉತ್ತಮ ವಾಗ್ದಾನಗಳ 7 ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ 8 ಅಗತ್ಯವಿರುತ್ತಿರಲಿಲ್ಲ. ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, – ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು 9 ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು ಎಂದು ಕರ್ತನು ಹೇಳುತ್ತಾನೆ. ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. 10 ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ ಎಂದು ಕರ್ತನು ಹೇಳುತ್ತಾನೆ. ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. 11 ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಜನರಾಗಿರುವರು. ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ 12 ಸಹೋದರನಿಗೂ ಕರ್ತನನ್ನು ತಿಳಿದುಕೊಳ್ಳಿರಿ ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 13 ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ ಎಂದು ಕರ್ತನು ನುಡಿಯುತ್ತಾನೆ.