1 ಸುರುಳಿಯ ಏಳು ಮುದ್ರೆಗಳನ್ನು ಕುರಿತದ್ದು ನಾನುಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು. 2 ಅದರ ಒಳಭಾಗದಲ್ಲಿಯೂ ಮತ್ತು ಹೊರಭಾಗದಲ್ಲಿಯೂ ಬರೆಯಲ್ಪಟ್ಟಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಇದಲ್ಲದೆ ಬಲಿಷ್ಠವಾದ ಒಬ್ಬ ದೇವದೂತನು ಈ ಸುರುಳಿಯನ್ನು ಬಿಚ್ಚುವುದಕ್ಕೂ ಅದರ ಮುದ್ರೆಗಳನ್ನು 3 ಒಡೆಯುವುದಕ್ಕೂ ಯಾವನು ಯೋಗ್ಯನು? ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು. ಆದರೆ ಆ ಸುರುಳಿಯನ್ನು 4 ತೆರೆಯುವುದಕ್ಕಾದರೂ ಅದರೊಳಗೆ ನೋಡುವುದಕ್ಕಾದರೂ ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾರಿಂದಲೂ ಆಗಲಿಲ್ಲ ಆಗ ಸುರುಳಿಯನ್ನು ತೆರೆಯುವುದಕ್ಕಾಗಲಿ 5 ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿ ಹಿರಿಯರಲ್ಲಿ ಒಬ್ಬನು ನನಗೆ – <<ಅಳಬೇಡ ನೋಡು, ಯೂದಕುಲದಲ್ಲಿ ಜನಿಸಿದ 6 ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನ್ನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ ಎಂದು ಹೇಳಿದನು. ಸಿಂಹಾಸನವು, ನಾಲ್ಕು 7 ಜೀವಿಗಳೂ ಇದ್ದ ಸ್ಥಳಮಧ್ಯದಲ್ಲಿಯೂ ಮತ್ತು ಹಿರಿಯರು ಇದ್ದ ಸ್ಥಳದ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ 8 ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು 9 ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು. 10 ಅವರು ಹೊಸಹಾಡನ್ನು ಹಾಡುತ್ತಾ ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಕುಲಗೋತ್ರಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ. 11 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು ಎಂಬ ಹೊಸ ಗೀತೆಯನ್ನು ಹಾಡುತ್ತಿದ್ದರು. 12 ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು. 13 ಅವರು ವಧಿಸಲ್ಪಟ್ಟ ಕುರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು ಎಂದು ಮಹಾಧ್ವನಿಯಿಂದ ಹಾಡಿದರು. 14 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ